August 14, 2020 11:34 pm

ಗಿರೀಶ್ ಕಾರ್ನಾಡ್ ಇನ್ನಿಲ್ಲ; ಅವರ ಬಗ್ಗೆ ಇನ್ನಷ್ಟು ಮಾಹಿತಿ

ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರು, ಸಾಹಿತಿ, ನಾಟಕಕಾರ & ಪದ್ಮಶ್ರೀ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ಇನ್ನಿಲ್ಲ.

ಧೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಕಾರ್ನಾಡರು ಇಂದು ಬಹು ಅಂಗಾಂಗ ವೈಫಲ್ಯದಿಂದ ತಮ್ಮ ಸ್ವ ಗೃಹದಲ್ಲಿ ವಿಧಿವಶರಾಗಿದ್ದಾರೆ.
ಮಹಾರಾಷ್ಟ್ರದ ಮಾಥೆರದಲ್ಲಿ ೧೯೩೪ ಮೇ ೧೪ ರಂದು ಜನಿಸಿದ  ಇವರು ದೇಶ ವಿದೇಶಗಳಲ್ಲಿ ಹಲವಾರು ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಕನ್ನಡ ರಂಗಭೂಮಿಯಲ್ಲಿ ದಶಕಗಳ ಕಾಲ ಹೊಸ ಪ್ರಯೋಗಗಳ ಮೂಲಕ ತಮ್ಮ ಛಾಪನ್ನು ಮೂಡಿಸಿರುವ ಇವರು ಕನ್ನಡ, ತೆಲುಗು, ತಮಿಳು, ಹಿಂದಿ ಸೇರಿದಂತೆ ಹಲವಾರು ಭಾಷೆಯ ಚಲನ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.
ನಾಡಿನ ಸಾಂಸ್ಕೃತಿಕ ವಲಯಕ್ಕೆ ಹೊಸ ತೇಜಸ್ಸನ್ನು ನೀಡಿದ ಕೀರ್ತಿ & ಕನ್ನಡ ರಂಗ ಭೂಮಿಗೆ ಇವರು ಕೊಟ್ಟ ಕೊಡುಗೆ ಅನನ್ಯ.
ಕಾರ್ನಾಡರ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ.

Be the first to comment

Leave a Reply

Your email address will not be published.


*