May 26, 2019 12:48 am

ಭಯೋತ್ಪಾದಕರಿಗೆ ಮೋದಿ ತಕ್ಕ ಉತ್ತರ ನೀಡಲಿದ್ದಾರೆ: ಅಮಿತ್ ಷಾ

ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಷಾ ರೋಡ್ ಷೋ
ದೇಶದ ಸುರಕ್ಷತೆ ಕಾಪಾಡಿ ಭಯೋತ್ಪಾದನೆಯನ್ನು ಹತ್ತಿಕ್ಕಲು ಮೋದಿಯವರಿಂದ ಮಾತ್ರ ಸಾಧ್ಯ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹೇಳಿದ್ದಾರೆ. ಅವರು ಇಂದು ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಭಾರೀ ಬಹಿರಂಗ ಸಭೆಯನ್ನುದ್ದೇಶಿ‌ ಮಾತನಾಡುತ್ತಿದ್ದರು.
ಬರುವ ೨೩ ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಲೋಕಸಭೆಗೆ ಮೂರನೇ ಹಂತದ ಚುನಾವಣೆ ನಡೆಯಲಿದ್ದು ಮಾಜಿ‌ ಮುಖ್ಯಮಂತ್ರಿಗಳ ಪುತ್ರರೀರ್ವರ ನಡುವೆ ನೇರ ಹಣಾಹಣಿ ನಡೆಯುತ್ತಿದೆ. ಬಿಜೆಪಿಯಿಂದ ಮಾಜಿ ಮುಖ್ಯಮಂತ್ರಿ‌ ಯಡಿಯೂರಪ್ಪನವರ ಪುತ್ರ ಹಾಲಿ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಪಕ್ಷದಿಂದ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪನವರ ಮಗ ಮಧು‌ ಬಂಗಾರಪ್ಪ ಕಣದಲ್ಲಿದ್ದಾರೆ.

Be the first to comment

Leave a Reply

Your email address will not be published.


*